ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಜುಲೈ 23, 2026 (ಗುರುವಾರ)ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.
