13 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ CM ಡಿಕೆ ಶಿವಕುಮಾರ್; ಯಾರಿಗೆ ಯಾವ ಖಾತೆ?

Jun 4, 2026 - 21:20
 0  627
13 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ CM ಡಿಕೆ ಶಿವಕುಮಾರ್; ಯಾರಿಗೆ ಯಾವ ಖಾತೆ?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.


ಇದರೊಂದಿಗೆ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಪ್ರಮುಖ ಖಾತೆಗಳಿಗಾಗಿ ಪಟ್ಟು ಹಿಡಿದಿದ್ದ ಹಿರಿಯ ಸಚಿವರು ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ ಖಾತೆಗಳನ್ನೇ ನೀಡಿ, ಅಲ್ಲಿ ಇನ್ನೂ ಕೆಲ ಅತೀಮುಖ್ಯ ಕಾರ್ಯ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಿದೆ’ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಹಲವು ಸಚಿವರಿಗೆ ಈ ಹಿಂದೆ ನೀಡಿದ್ದ ಖಾತೆಗಳನ್ನು ನೀಡಲಾಗಿದೆ

What's Your Reaction?

Like Like 0
Dislike Dislike 0
Love Love 1
Funny Funny 2
Angry Angry 0
Sad Sad 2
Wow Wow 0