ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್ ದೇವರನಾಡಿನ ನೂತನ ಮುಖ್ಯಮಂತ್ರಿ
Kerala New CM: ಎಐಸಿಸಿ ನಾಯಕರು ಕೊನೆಗೂ ಕೇರಳ ನೂತನ ಸಿಎಂ ಹೆಸರನ್ನು ಘೋಷಣೆ ಮಾಡಿದ್ದಾರೆ. ದೇವರನಾಡಿನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದು, 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಕೇರಳದಲ್ಲಿ ಯುಡಿಎಫ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಾನಾ ಲೆಕ್ಕಾಚಾರಗಳ ಬಳಿಕ ವರಿಷ್ಠರು ಅಂತಿಮವಾಗಿ ಇಂದು (ಮೇ 14) ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಿದ್ದಾರೆ.
ತಿರುವನಂತಪುರಂ/ದೆಹಲಿ, ಮೇ 14: ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಪಕ್ಷದ ವರಿಷ್ಠರು ಪ್ರಕಟಿಸಿದ್ದಾರೆ.
ಏಪ್ರಿಲ್ 9ರಂದು ಕೇರಳ ವಿಧಾನಸಭಾ ಚುನಾವಣೆ ನಡೆದಿದ್ದು, ಇದರ ಫಲಿತಾಂಶ ಮೇ 4ರಂದು ಪ್ರಕಟಗೊಂಡಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಡಳಿತಾರೂಢ ಎಲ್ಡಿಎಫ್ ಕೇವಲ 35 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲುಂಡಿತ್ತು. ಹೀಗಿದ್ದರೂ ನೂತನ ಸಿಎಂ ಆಯ್ಕೆಗೆ ಬರೋಬ್ಬರಿ 10 ದಿನಗಳನ್ನು ಕಾಂಗ್ರೆಸ್ ನಾಯಕರು ತೆಗೆದುಕೊಂಡಿದ್ದಾರೆ.
ಕೇರಳದಲ್ಲಿ ಸಂಭ್ರಮಾಚರಣೆ
#WATCH | Thiruvananthapuram: Celebrations begin at the Congress Office in Keralam after the party names VD Satheesan as the next Chief Minister of Keralam. pic.twitter.com/LHG0gEyymA — ANI (@ANI) May 14, 2026
ಒಳ್ಳೆಯ ನಿರ್ಧಾರ ಎಂದ ಸನ್ನಿ ಜೋಸೆಫ್
#WATCH | Thiruvananthapuram | "It is a very good decision," says Keralam Pradesh Congress Committee president Sunny Joseph, as VD Satheesan is announced as Keralam CM. pic.twitter.com/PkiIffXqvl — ANI (@ANI) May 14, 2026
ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಆಯ್ಕೆ ಸಂಬಂಧ ಕೇರಳ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್ ಪ್ರತಿಕ್ರಿಯೆ ನೀಡಿದ್ದಾರೆ. ತಿರುವನಂತಪುರಂನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಇದು ತುಂಬಾ ಒಳ್ಳೆಯ ನಿರ್ಧಾರ ಎಂದು ಅಭಿಪ್ರಾಯಪಟ್ಟಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
What's Your Reaction?
Like
2
Dislike
0
Love
1
Funny
0
Angry
0
Sad
3
Wow
0

