ಮಂಗಳೂರಿನ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ಕಾರ್ಮಿಕ ಸಾವು :* *ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗ

May 22, 2026 - 22:06
 0  32
ಮಂಗಳೂರಿನ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ನಡೆದ ಲಿಫ್ಟ್ ಅವಘಡದಲ್ಲಿ ಕಾರ್ಮಿಕ ಸಾವು :* *ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗ

ಮಂಗಳೂರು ಮೇ 22:  ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಕಾರ್ಮಿಕನೊಬ್ಬ ಲಿಫ್ಟ್ ಅವಘಡಕ್ಕೆ ಬಲಿಯಾದ ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ ಎಸ್.ಡಿ.ಟಿ.ಯು ಜಿಲ್ಲಾ ನಿಯೋಗವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ರವರನ್ನು  ಭೇಟಿ ಮಾಡಿ ಮನವಿ ಸಲ್ಲಿಸಿತು. ಅಪಘಾತ ಸಂಭವಿಸಿದ ಲಿಫ್ಟ್ ಅನಧಿಕೃತವಾಗಿದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಟ್ಟಡ ನಿರ್ಮಾಣ ಹಾಗೂ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದರೆ ಸಂಬಂಧಪಟ್ಟ ಸಂಸ್ಥೆ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು.
ಕಾರ್ಮಿಕರ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಅತ್ಯಂತ ಖಂಡನೀಯ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು
ನಗರದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಲಿಫ್ಟ್‌ಗಳು ಹಾಗೂ ಸುರಕ್ಷತಾ ಮಾನದಂಡಗಳನ್ನು ಪಾಲಿಸದ ವಾಣಿಜ್ಯ ಕಟ್ಟಡಗಳ ವಿರುದ್ಧ ಮಹಾನಗರ ಪಾಲಿಕೆ ತಕ್ಷಣ ವಿಶೇಷ ಪರಿಶೀಲನಾ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಎಸ್.ಡಿ.ಟಿ.ಯು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಎಸ್.ಡಿ.ಟಿ.ಯು ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗ್ರೆ  ಜೊತೆ ಕಾರ್ಯದರ್ಶಿ ರಹಿಮಾನ್ ಮುನ್ನೂರು ತಾಲೂಕು ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಬಿಪಿ ಉಪಾಧ್ಯಕ್ಷರಾದ ಮುಸ್ತಫಾ ಪರ್ಲಿಯಾ ಕೋಶಾಧಿಕಾರಿ ಶರೀಫ್ ಕುತ್ತಾರ್ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 0